BIG NEWS: ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನಿಗೆ ಗ್ರಾಮಸ್ಥರಿಂದ ತರಾಟೆ

ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ವೇಳೆ ಮತ ಕೇಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಗೆ ಸಾಸನೂರು ಗ್ರಾಮಸ್ಥರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

5 ವರ್ಷಗಳ ಹಿಂದೆ ವೋಟ್ ಹಾಕಿದ್ದೇವೆ ನಂತರ ಒಮ್ಮೆಯೂ ಶಾಸಕರಾಗಿ ಮುಖ ತೋರಿಸಿಲ್ಲ. ಒಂದು ಬಾರಿಯೂ ಗ್ರಾಮಕ್ಕೆ ಬಂದಿಲ್ಲ, ಜನರ ಸಮಸ್ಯೆ ಆಲಿಸಿಲ್ಲ. ಈಗ ಮತ್ತೆ ವೋಟ್ ಕೇಳಲು ಬಂದಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read