BIG NEWS: ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ; ಸಿಎಂ ಹೇಳಿದ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ.

ಶಿಗ್ಗಾಂವಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ನಟ ಕಿಚ್ಚ ಸುದೀಪ್, ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ, ಈ ಹಿಂದೆಯೂ ನನ್ನ ಸ್ನೇಹಿತರ ಪರವಾಗಿ ಪ್ರಚಾರ ಮಾಡಿದ್ದೆನು. ಶಿಗ್ಗಾವಿ ಕ್ಷೇತ್ರದಿಂದ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದರು.

ಸಿಎಂ ಬೊಮ್ಮಾಯಿ ಅವರು ಹೇಳಿದ ಕಡೆ ನಾನು ಪ್ರಚಾರ ಮಾಡುತ್ತೇನೆ. ಪಾದಯಾತ್ರೆ, ರೋಡ್ ಶೋ ಎಲ್ಲವೂ ಇರುತ್ತೆ. ಮೇ 7ರವರೆಗೆ ಚುನಾವಣಾ ಪ್ರಚಾರ ಇರುತ್ತೆ ಎಂದಿದ್ದಾರೆ. ಬೇರೆ ಕಡೆಯಿಂದಲೂ ನನಗೆ ಚುನಾವಣ ಅಪ್ರಚಾರಕ್ಕೆ ಕೇಳಿದ್ದರು. ಪ್ರತಿ ಬಾರಿ ಕೇಳ್ತಾರೆ. ಅದರಂತೆ ಈ ಬಾರಿಯೂ ಕೇಳಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read