BIG NEWS: ಚುನಾವಣೆಗೆ ಸ್ಪರ್ಧಿಸಲು ಮುಂದಾದ PSI ಹಗರಣದ ಕಿಂಗ್ ಪಿನ್; ಕಾಂಗ್ರೆಸ್ ಟಿಕೆಟ್ ನೀಡುವಂತೆ ರುದ್ರೇಗೌಡ ಪಾಟೀಲ್ ಒತ್ತಾಯ

ಕಲಬುರ್ಗಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯ ಪಟ್ಟಿ ಬೆಳೆಯುತ್ತಿದೆ. ಪಿ ಎಸ್ ಐ ನೇಮಕಾತಿ ಅಕ್ರಮದ ಕಿಂಗ್ ಪಿನ್, ಆರೋಪಿ ರುದ್ರೇಗೌಡ ಪಾಟೀಲ್ ತಾನೂ ಕೂಡ ಚುನಾವಣೆಗೆ ಸ್ಪರ್ಧಿಸಿವುದಾಗಿ ಘೋಷಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದು, ಟಿಕೆಟ್ ನೀಡುವಂತೆ ಕೈ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಪ್ರಸ್ತುತ ರುದ್ರೇಗೌಡ ಪಾಟೀಲ್ ಕಲಬುರ್ಗಿ ಜೈಲಿನಲ್ಲಿದ್ದು, ಜಾಮೀನಿಗಾಗಿ ಯತ್ನಿಸುತ್ತಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನ ತಯಾರಿ ನಡೆಸಿರುವ ರುದ್ರೇಗೌದ ಪಾಟೀಲ್ ಗೆ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಬೇಕು ಎಂದು ಸಹೋದರ ಮಹಾಂತೇಶ್ ಪಾಟೀಲ್ ಒತ್ತಾಯಿಸಿದ್ದಾರೆ. ಈಗಾಗಲೇ ಹಲವು ಬಾರಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಅಫಜಲಪುರ ಕ್ಷೇತ್ರದಿಂದ ರುದ್ರೇಗೌಡ ಪಾಟೀಲ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read