HomeKarnatakaBIG NEWS: ಚುನಾವಣೆಯಲ್ಲಿ ಬೊಮ್ಮಾಯಿ ಕಟ್ಟಿಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್; ಸಿಎಂ ಆಪ್ತನನ್ನೇ ಕಣಕ್ಕಿಳಿಸಲು ಸಿದ್ಧತೆ

BIG NEWS: ಚುನಾವಣೆಯಲ್ಲಿ ಬೊಮ್ಮಾಯಿ ಕಟ್ಟಿಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್; ಸಿಎಂ ಆಪ್ತನನ್ನೇ ಕಣಕ್ಕಿಳಿಸಲು ಸಿದ್ಧತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಬಿಜೆಪಿಯ ಘಟಾನುಘಟಿ ನಾಯಕರನ್ನು ಮಣಿಸಲು ತಂತ್ರಗಾರಿಕೆ ರೂಪಿಸುತ್ತಿದೆ. ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಟ್ಟಿಹಾಕಲು ಮಾಸ್ಟರ್ ಪ್ಲಾನ್ ರಚಿಸಲಾಗಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ವಲಯದಲ್ಲಿದ್ದ ಮಾಜಿ ಸಂಸದ ಹಾಗೂ ಮಾಜಿ ಶಾಸಕರಾಗಿರುವ ಬಿಜೆಪಿ ಮುಖಂಡ ಮಂಜುನಾಥ ಕುನ್ನೂರ ಅವರನ್ನು ಈಗ ಕಾಂಗ್ರೆಸ್ ಪಕ್ಷ ತನ್ನ ತೆಕ್ಕೆಗೆ ಸೆಳೆದುಕೊಂಡಿದ್ದು, ಸೋಮವಾರದಂದು ಮಂಜುನಾಥ ಕುನ್ನೂರ ತಮ್ಮ ಪುತ್ರ ರಾಜು ಕುನ್ನೂರ ಅವರೊಂದಿಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಮಂಜುನಾಥ ಕುನ್ನೂರ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಬಹುತೇಕ ಖಚಿತ ಎನ್ನಲಾಗಿದ್ದು, ಪ್ರಬಲ ಸ್ಪರ್ಧೆ ಒಡ್ಡುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಲಾಗಿತ್ತಾದರೂ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಂಜುನಾಥ ಕುನ್ನೂರ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular