BIG NEWS: ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; PSI ಹಗರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಘೋಷಣೆ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಇದೀಗ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ನಿನ್ನೆ ರುದ್ರೇಗೌಡ ಪಾಟೀಲ್ ನನ್ನು ಬಂಧಿಸಲು ಬಂದಿದ್ದ ಸಿಐಡಿ ಅಧಿಕಾರಿಗಳಿಗೆ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಆರೋಪಿ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದು, ಜನರು ಬಯಸಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾನೆ.

ಜನರು ಬಯಸಿದರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೇ ಸ್ಪರ್ಧಿಸುತ್ತೆನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ಇಲ್ಲೇ ಇದ್ದೇನೆ. ಇಡಿ ಅಧಿಕಾರಿಗಳು ಬಂದಾಗ ಅವರ ವಿಚಾರಣೆ ಎದುರಿಸಿದ್ದೇನೆ. ಇಡಿ ಅಧಿಕಾರಿಗಳು ಬಂದು ಹೋದ ಮೇಲೆ ನಾನು ಮನೆಯಿಂದ ಹೊರಗೆ ಬಂದಿದ್ದೇನೆ. ಈಗ ಸಿಐಡಿ ಅಧಿಕಾರಿಗಳು ಬಂದಿದ್ದಾರೆ. ಅವರನ್ನು ನಾನು ತಳ್ಳಿ ಓಡಿಹೋಗಿದ್ದೇನೆ ಎಂಬುದು ಸುಳ್ಳು. ಸಿಐಡಿ ವಿರುದ್ಧ ನಡೆದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ಈ ನೆಲದ ಕಾನೂನು ಗೌರವಿಸುವ ಮನುಷ್ಯ ರಾಜಕೀಯ ಕುತಂತ್ರದಿಂದಾಗಿ ನನ್ನನ್ನು, ನನ್ನ ಸಹೋದರನನ್ನು ಸಿಲುಕಿಸಿದ್ದಾರೆ. ಸಮಾಜಸೇವೆ, ಚುನಾವಣೆಯಲ್ಲಿ ನಿಲ್ಲಬಹುದು ಎಂಬ ಕಾರಣಕ್ಕೆ ಕೆಲ ಸಿಐಡಿ ಅಧಿಕಾರಿಗಳು ಕೆಲ ರಾಜಕೀಯ ಮುಖಂಡರ ಮಾತು ಕೇಳಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read