BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ ಹಂಚಲಾಗಿದ್ದ ಕುಕ್ಕರ್ ನಿಂದ ಅಡುಗೆ ಮಾಡುತ್ತಿದ್ದಾಗ ಕುಕ್ಕರ್ ಏಕಾಏಕಿ ಸ್ಫೋಟಗೊಂಡಿದೆ. ಬಾಲಕಿ ಗಾಯಗೊಂಡಿದ್ದಾಳೆ.

ಗಾಯಾಳು ಬಾಲಕಿಗೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡ ವೇದ ಎಂಬುವವರು ಈ ಕುಕ್ಕರ್ ಹಂಚಿದ್ದರು ಎಂಬ ಆರೋಪ ಕೇಳಿಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read