HomeKarnatakaBIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ.

ಎಂ.ಎಂ. ಹಿರೇಮಠ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.

ಕೆಲ ದಿನಗಳಿಂದ ಅಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿರೇಮಠ ಅವರು ರುದ್ರಪ್ಪ ಲಮಾಣಿ ಹೊರತುಪಡಿಸಿ ಬೇರೆ ಯಾರಿಗಾದರೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.

ಆದರೆ ರುದ್ರಪ್ಪ ಲಮಾಣಿ ಹೆಸರನ್ನೇ ಘೋಷಣೆ ಮಾಡಿರುವುದರಿಂದ ಅಸಮಾಧಾನಗೊಂಡು ಹಿರೇಮಠ ರಾಜೀನಾಮೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular