BIG NEWS: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಆರಂಭ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ.

ಕಾಂಗ್ರೆಸ್ ಗೆ ರಾಜ್ಯದ ಜನರು ಅಭೂತಪೂರ್ವ ಬಹುಮತ ನೀಡಿದ್ದಾರೆ ಬಸವಣ್ಣನವರ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯದ ಪರವಾಗಿ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ತತ್ವದಡಿ ಕೆಲಸ ಮಾಡಬೇಕು. ಬಸವಣ್ಣ, ಸರ್ವಜ್ಞ ಸೇರಿದಂತೆ ಅನೇಕರ ಶಾಂತಿಯ ತತ್ವ ಪಾಲನೆಯಾಗಬೇಕು ಎಂದರು. ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ವಿವರಿಸಿದರು.

ಇಂದಿರಾ ಕ್ಯಾಂಟೀನ್ ಮೂಲಕ ರಾಜ್ಯ ಹಸಿವು ಮುಕ್ತವಾಗಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮೊದಲಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ.

ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ರೂ ಹಣ ನೀಡಲಾಗುತ್ತದೆ. ನಿರುದ್ಯೋಗಿ ಡಿಪ್ಲೋಮಾದಾರರಿಗೆ ತಿಂಗಳಿಗೆ 1500 ರೂ ನೀಡಲಾಗುತ್ತದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಕೊಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ ನೀಡಲಾಗುತ್ತದೆ. ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read