BIG NEWS: ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ; ಸಿ.ಟಿ ರವಿ ಸ್ಪಷ್ಟನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಬಿರುಸುಗೊಂಡಿವೆ. ಬಿಜೆಪಿಯಲ್ಲಿ ಮಾಜಿ ಸಿಎಂ ಜಗದೀಶ್ ಹೆಟ್ಟರ್ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ, ಬೇರೆ ಬೇರೆ ಕಾರಣಗಳಿಂದ ಗೊಂದಲವಾಗಿರಬಹುದು ಆದರೆ ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read