HomeKarnatakaBIG NEWS: ಜಗದೀಶ್ ಶೆಟ್ಟರ್ ಗೆ ಸತತ ಹಿನ್ನಡೆ; 10,000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡ...

BIG NEWS: ಜಗದೀಶ್ ಶೆಟ್ಟರ್ ಗೆ ಸತತ ಹಿನ್ನಡೆ; 10,000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡ ಮಹೇಶ್ ಟೆಂಗಿನಕಾಯಿ

ತಮಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಡಿದೆದ್ದು ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಅವರ ಪ್ರತಿಸ್ಪರ್ಧಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಸತತವಾಗಿ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ಇಬ್ಬರ ನಡುವಿನ ಅಂತರ 10,000 ಮತಗಳಿಗೂ ಅಧಿಕ ಎಂದು ತಿಳಿದುಬಂದಿದೆ.

ತಮಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿ ಎಲ್ ಸಂತೋಷ್ ಕಾರಣ ಎಂದು ನೇರವಾಗಿಯೇ ಆರೋಪ ಮಾಡಿದ್ದ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಸೇರ್ಪಡೆಗೊಂಡು ಅಭ್ಯರ್ಥಿಯಾಗಿದ್ದ ಹಿನ್ನೆಲೆಯಲ್ಲಿ ಅವರ ಸೋಲಿಗಾಗಿ ಬಿಜೆಪಿ ಕಾರ್ಯತಂತ್ರ ರೂಪಿಸಿತ್ತು. ಆದರೆ ಇನ್ನೂ ಕೆಲ ಸುತ್ತುಗಳ ಮತ ಎಣಿಕೆ ಇರುವ ಕಾರಣ ಅಂತಿಮ ಗೆಲುವು ಯಾರಿಗೆ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular