BIG NEWS: ಜನಾರ್ಧನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಜನಾರ್ಧನ ರೆಡ್ಡಿ ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ ಎನ್ನಲಾದ ಆಸ್ತಿ ಜಪ್ತಿಗೆ ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಕಳೆದ ಆಗಸ್ಟ್ ತಿಂಗಳಿನಲ್ಲಿಯೇ ಕೇಳಿತ್ತು. ಜನಾರ್ಧನ ರೆಡ್ಡಿಯವರ 219 ಆಸ್ತಿಗಳನ್ನು ಹೊಸದಾಗಿ ಪತ್ತೆ ಹಚ್ಚಲಾಗಿದ್ದು, ಆಂಧ್ರ ತೆಲಂಗಾಣ ರಾಜ್ಯಗಳಲ್ಲಿಯೂ ಆಸ್ತಿ ಪತ್ತೆಯಾಗಿದೆ. ಅಕ್ರಮ ಹಣದ ಮೂಲದಿಂದ ಆಸ್ತಿ ಖರೀದಿಸಿದ್ದು ಎಂದು ತಿಳಿದುಬಂದಿದ್ದು, ಆಸ್ತಿ ಜಪ್ತಿಗೆ ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಕೋರಿತ್ತು. ಆದರೆ ರಾಜ್ಯ ಸರ್ಕಾರ ಈವರೆಗೆ ಅನುಮತಿ ನೀಡಿಲ್ಲ. ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ವಿಳಂಬ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ. ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read