HomeKarnatakaBIG NEWS: ಜೆಡಿಎಸ್ ಗೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ; ಚುನಾವಣೆ ಆರಂಭದಲ್ಲೇ ಆಘಾತ

BIG NEWS: ಜೆಡಿಎಸ್ ಗೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ; ಚುನಾವಣೆ ಆರಂಭದಲ್ಲೇ ಆಘಾತ

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡದಲ್ಲಿ ಜೆಡಿಎಸ್ ಗೆ ಆರಂಭದಲ್ಲೇ ಆಘಾತವಾಗಿದೆ. ಶಿವಾಜಿನಗರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತಗೊಂಡಿದೆ. ಹಲವು ವರ್ಷಗಳ ಕಾಲ ವಿದೇಶದಲ್ಲಿದ್ದ ಅಬ್ದುಲ್ ಜಫರ್ ಅಲಿ ಅವರ ಹೆಸರು ಮತದಾರರ ಪಟ್ಟಿಯಲ್ಲಿಯೇ ಇಲ್ಲದಿರುವುದರಿಂದ ನಾಮಪತ್ರ ಸ್ವೀಕೃತವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ ಎಂದು ಶಿವಾಜಿನಗರ ಆರ್ ಓ ಬಸವರಾಜ್ ಸೋಮನ್ಣವರ್ ತಿಳಿಸಿದ್ದಾರೆ. ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular