BIG NEWS: ಜೆಡಿಎಸ್‌ ಗೆ ಮತ್ತೊಂದು ಶಾಕ್; ಮತ್ತೋರ್ವ ಶಾಸಕ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ

ಹಾಸನ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ ಪಕ್ಷದ ಮುಖಂಡರು. ಈಗಾಗಲೇ ಜೆಡಿಎಸ್ ನ ಪ್ರಮುಖ ಶಾಸಕರು, ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ಹಾಸನ ಜಿಲ್ಲೆಯ ಅರಸಿಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸುಳಿವು ನೀಡಿದ್ದಾರೆ.

ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಶಿವಲಿಂಗೇಗೌಡರ ಜತೆ ಈಗಾಗಲೇ ಮಾತುಕತೆ ನಡೆದಿದೆ. ಇತ್ತೀಚೆಗೆ ಜೆಡಿಎಸ್ ನ ಯಾವುದೇ ಕಾರ್ಯಕ್ರಮಗಳಲ್ಲಿಯೂ ಅವರು ಭಾಗಿಯಾಗಿಲ್ಲ. ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಇದ್ದಾರೆ. ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೂ ಹಲವು ಬಾರಿ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಶಿವಲಿಂಗೇ ಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read