BIG NEWS: ಟಿಕೆಟ್ ಕೈತಪ್ಪಿದ್ರೂ ಬಿಜೆಪಿ ಬಿಡುವಂತಿಲ್ಲ; ಆಣೆ ಪ್ರಮಾಣ ಮಾಡಿಸಿಕೊಂಡ ಸಚಿವ ಮುನಿರತ್ನ

ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನರಿಂದ ಆಣೆ ಪ್ರಮಾಣದ ರಾಜಕೀಯ ಆರಂಭವಾಗಿದೆ.

ಟಿಕೆಟ್ ಕೈತಪ್ಪಿದರೂ ಯಾರೂ ಪಕ್ಷವನ್ನು ಬಿಡುವಂತಿಲ್ಲ ಎಂದು ಸಚಿವ ಮುನಿರತ್ನ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಬಿಜೆಪಿ ಟಿಕೆಟ್ ಗಾಗಿ ಆಕ್ಷಾಂಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾಜಿ ಶಾಸಕರಾದ ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ, ಬಿ.ವಿ.ಮಹೇಶ್, ವಿ.ಶೇಷು, ಅಮರೇಶ್ ಸೇರಿದಂತೆ 6 ನಾಯಕರು ಟಿಕೆಟ್ಗಾಗಿ ಲಾಭಿ ನಡೆಸಿದ್ದಾರೆ. ಒಂದು ವೇಳೆ ಎಂ.ನಾರಾಯಣಸ್ವಾಮಿಗೆ ಇಜೆಪಿ ಟಿಕೆಟ್ ಕೈತಪ್ಪಿದರೆ ಜೆಡಿಎಸ್ ಗೆ ಬೆಂಬಲ ನೀಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಹೊರವಲಯದ ರೆಸಾರ್ಟ್ ನಲ್ಲಿ ಸಭೆ ನಡೆಸಿರುವ ಸಚಿವ ಮುನಿರತ್ನ, ಟಿಕೆಟ್ ಆಕಾಂಕ್ಷಿಗಳಿಗೆ ಒಂದು ವೇಳೆ ಟಿಕೆಟ್ ಕೈತಪ್ಪಿದರೂ ಪಕ್ಷ ಬಿಡುವಂತಿಲ್ಲ, ಬಿಜೆಪಿಯನ್ನು ಬೆಂಬಲಿಸಬೇಕು ಎಂದು ದೇವರ ಮೇಲೆ ಆಣೆ, ಪ್ರಮಾಣ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read