BIG NEWS: ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ 10 ಕ್ಕೂ ಅಧಿಕ ಬಿಜೆಪಿ ಶಾಸಕರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹತ್ತಕ್ಕೂ ಅಧಿಕ ಬಿಜೆಪಿ ಶಾಸಕರು ಟಿಕೆಟ್ ಕೈತಪ್ಪುವ ಭೀತಿ ಹೊಂದಿದ್ದು, ಹಾಲಿ ಶಾಸಕರೆಲ್ಲರಿಗೂ ಸಹ ಟಿಕೆಟ್ ನೀಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುತ್ತಿದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುವ ಕಾರಣ ಆತಂಕ ತಪ್ಪಿಲ್ಲವೆಂದು ಹೇಳಲಾಗಿದೆ.

ವಯೋಮಿತಿ ಸೇರಿದಂತೆ ಕೆಲ ಶಾಸಕರುಗಳ ಜನಪ್ರಿಯತೆ ಕುಸಿದಿರುವುದು ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ಕಂಡುಬಂದಿದೆ ಎನ್ನಲಾಗಿದ್ದು, ಹೀಗಾಗಿ ಅವರುಗಳ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ವಯೋಮಿತಿ ಕಾರಣಕ್ಕೆ ತಮಗೆ ಟಿಕೆಟ್ ನೀಡದಿದ್ದರೆ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡಿಸಲು ಕೆಲವರು ಯತ್ನ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಗುಜರಾತ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 30ಕ್ಕೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಹೊಸ ಮುಖಗಳಿಗೆ ಮಣೆ ಹಾಕಿ ಅದರಲ್ಲಿ ಯಶಸ್ಸು ಕಂಡಿರುವ ಬಿಜೆಪಿ ಹೈಕಮಾಂಡ್, ಕರ್ನಾಟಕದಲ್ಲೂ ಅಂತಹ ಪ್ರಯತ್ನಕ್ಕೆ ಕೈ ಹಾಕುವ ಮುನ್ನ ಸಾಧಕ – ಬಾಧಕಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಹಲವು ಶಾಸಕರಿಗೆ ತಮಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಚಿಂತೆ ಕಾಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read