BIG NEWS: ಟಿಕೆಟ್ ಸಿಗುವುದಿಲ್ಲವೆಂಬುದು ಖಚಿತವಾಗುತ್ತಿದ್ದಂತೆ ‘ನಿವೃತ್ತಿ’ ನಿರ್ಧಾರ ಕೈಗೊಂಡರಾ ಈಶ್ವರಪ್ಪ ? ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ ಹಿರಿಯ ನಾಯಕನ ನಿರ್ಧಾರ

ಕಳೆದ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದು, ಯಾವುದೇ ಕ್ಷೇತ್ರಕ್ಕೆ ತಮ್ಮ ಹೆಸರನ್ನು ಪರಿಗಣಿಸದಂತೆ ಮನವಿ ಮಾಡಿದ್ದಾರೆ.

ಈಶ್ವರಪ್ಪ ಅವರ ನಿವೃತ್ತಿ ನಿರ್ಧಾರ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದ್ದು, ಈ ಬಾರಿ ತಮಗೆ ಟಿಕೆಟ್ ಸಿಗುವುದಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಈ ತೀರ್ಮಾನ ಕೈಗೊಂಡರಾ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಈ ಮೂಲಕ ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಕೊಡಿಸಲು ದಾಳ ಉರುಳಿಸಿರಬಹುದು ಎಂಬ ಮಾತುಗಳೂ ಸಹ ಕೇಳಿ ಬರುತ್ತಿವೆ.

ನೆನ್ನೆಯ ತನಕ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಈಶ್ವರಪ್ಪನವರು ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದರ ಹಿಂದೆ ಮಹತ್ವದ ಕಾರಣ ಇರಬಹುದು ಎಂದು ಊಹಿಸಲಾಗುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿ ಮಟ್ಟದಲ್ಲಿ ಕಸರತ್ತು ನಡೆಯುತ್ತಿರುವಾಗಲೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read