BIG NEWS: ಡಿಕೆಶಿ ಜೊತೆ ಒಂದೇ ಕಾರಿನಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಲಕ್ಷ್ಮಣ ಸವದಿ

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಪಕ್ಷದ ವಿರುದ್ಧ ಕಿಡಿ ಕಾರುತ್ತಿರುವ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜೊತೆ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಅವರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಲಕ್ಷ್ಮಣ ಸವದಿ ಅವರೊಂದಿಗೆ ಮಾತುಕತೆ ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಹ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ. ಮೂವರು ಚರ್ಚೆ ನಡೆಸಿದ ಬಳಿಕ ಲಕ್ಷ್ಮಣ ಸವದಿ, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಅಥಣಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ತಮ್ಮ ಪುತ್ರನಿಗೆ ನೀಡಬೇಕೆಂದು ಕಾಂಗ್ರೆಸ್ ನಾಯಕರ ಮುಂದೆ ಲಕ್ಷ್ಮಣ ಸವದಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಜೊತೆಗೆ ನಾಲ್ಕೈದು ಕ್ಷೇತ್ರಗಳ ಗೆಲುವಿನ ಜವಾಬ್ದಾರಿ ತಮ್ಮದು ಎಂದು ಹೇಳಿದ್ದಾರೆನ್ನಲಾಗಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡಿದ ಬಳಿಕ ಕಾಂಗ್ರೆಸ್ ಸೇರುವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read