BIG NEWS: ಡಿ. ಕೆ. ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನವಿಲ್ಲ; ಸಿಎಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಇನ್ನು ಎರಡು ಮೂರು ದಿನಗಳಲ್ಲಿ ರಾಜ್ಯದ ಚುನಾವಣಾ ಚಿತ್ರಣವೇ ಬದಲಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರವನ್ನು ಕಾಂಗ್ರೆಸ್ ಹೆಣೆದಿದೆ ಎಂದು ಕಿಡಿಕಾರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಕ್ತದಲ್ಲಿ ಬರೆದುಕೊಡುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿ.ಕೆ. ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದರು.

ಇದೇ ವೇಳೆ ಪ್ರಧಾನಿ ಮೋದಿ ಸಂವಾದ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಿ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ಸಂವಾದದಲ್ಲಿ ಹಲವಾರು ವಿಚಾರ ಹೇಳಿದ್ದಾರೆ. ಮೋದಿಯವರು ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read