BIG NEWS: ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣ; ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೋಟೀಸ್ ಜಾರಿ ಮಾಡಿದೆ.

ಏನೇ ಸಮಸ್ಯೆಗಳಿದ್ದರೂ ಸರ್ಕಾರದ ಗಮನಕ್ಕೆ ತರಬೇಕು. ಬಹಿರಂಗ ಹೇಳಿಕೆಗಳನ್ನ ನೀಡಬಾರದು. ಸೇವಾ ನಿಯಮದ ಶಿಸ್ತು ಉಲ್ಲಂಘನೆ ಮಾಡದಂತೆ ನೋಟೀಸ್ ನಲ್ಲಿ ಖಡಕ್ ಸೂಚನೆ ನೀಡಿದೆ.

ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಗಳನ್ನು ಮಾಡಿದ್ದ ಡಿ.ರೂಪಾ ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಖಾಸಗಿ ಫೋಟೋ ವೈರಲ್ ಮಾಡಿದ್ದರು. ಅಲ್ಲದೇ ಮಾಧ್ಯಮಗಳ ಮುಂದೆ ಬಂದು ಹೇಳಿಕೆಗಳನ್ನು ನೀಡಿದ್ದರು. ಇಬ್ಬರು ಮಹಿಳಾ ಅಧಿಕಾರಿಗಳ ವರ್ತನೆಯಿಂದ ರಾಜ್ಯ ಸರ್ಕಾರ ಮುಜುಗರಕ್ಕೀಡಾದ ಹಿನ್ನೆಲೆಯಲ್ಲಿ ಇದೀಗ ಇಬ್ಬರು ಅಧಿಕಾರಿಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ನೋಟೀಸ್ ಜಾರಿ ಮಾಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read