HomeIndiaBIG NEWS: ತಮಿಳುನಾಡು ಚುನಾವಣೆ: ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ: ದಳಪತಿ ವಿಜಯ್ ಘೋಷಣೆ

BIG NEWS: ತಮಿಳುನಾಡು ಚುನಾವಣೆ: ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ: ದಳಪತಿ ವಿಜಯ್ ಘೋಷಣೆ

ಸೇಲಂ: ಮುಂಬರುವ ತಮಿಳುನಾಡು ಚುನಾವಣೆ ಹಿನ್ನೆಲೆಯಲ್ಲಿ ತಮಿಳಿಗ ವೆಟ್ರಿ ಕಳಂ ಎಂಬ ತಮ್ಮದೇ ಹೊಸ ಪಕ್ಷವನ್ನು ಸ್ಥಾಪಿಸಿ ರಾಜಕೀಯ ರಂಗಕ್ಕೆ ಧುಮುಕಿರುವ ನಟ ದಳಪತಿ ವಿಜಯ್, ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.

ಸೇಲಂ ನಲ್ಲಿ ನಡೆದ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ನಟ ವಿಜಯ್, ತಮಿಳುನಾಡು ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಆದರೆ ಯಾವುದೇ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಸ್ವತಂತ್ರವಾಗಿ ಸ್ಪರ್ಧಿಸಿ ಬಹುಮತದ ಮೂಲಕ ಸರ್ಕಾರ ರಚಿಸುವ ವಿಶ್ವಾಸವನ್ನು ದಳಪತಿ ವಿಜಯ್ ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನ್ರ‍್ತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ನಮ್ಮ ಪಕ್ಷ ತನ್ನದೇ ಬಲದಿಂದ ಬಹುಮತ ಪಡೆಯಲಿದೆ ಎಂದು ವಿಸ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular