BIG NEWS: ತಮ್ಮ ತಂದೆ ಮತ್ತೊಮ್ಮೆ ಸಿಎಂ ಆಗಬೇಕೆಂದ ಯತೀಂದ್ರ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಅಲ್ಲದೆ ಅವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಮುಂದಿನ ಪಟ್ಟಿಯಲ್ಲಿ ಈ ಕುರಿತು ಸುಳಿವು ಸಿಗುವ ಸಾಧ್ಯತೆ ಇದೆ.

ಇದರ ಮಧ್ಯೆ ತಮ್ಮ ತಂದೆಯವರಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ಮತ್ತೊಮ್ಮೆ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಮಗನಿಗೆ ತಮ್ಮ ತಂದೆ ಸಿಎಂ ಆಗಬೇಕೆಂಬ ಆಸೆ ಇರುವುದಿಲ್ಲ ಹೇಳಿ. ಅಲ್ಲದೆ ನಮ್ಮ ತಂದೆಯವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಯಾದರೆ ಇದನ್ನು ಮುಂದುವರಿಸಲಿದ್ದಾರೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read