BIG NEWS: ತಮ್ಮ ವಿರುದ್ಧದ ಆರೋಪ ತಳ್ಳಿಹಾಕಿದ ರಾಜು ಕಾಗೆ; ರಾಷ್ಟ್ರಪತಿ, ಪ್ರಧಾನಿ, ಸಿಎಂ ಕಿರುಕುಳ ಕೊಡ್ತಿದ್ದಾರೆ ಅಂದ್ರೆ ಸರಿ ಆಗುತ್ತಾ ಎಂದ ಶಾಸಕ

ಬೆಳಗಾವಿ: ಗ್ರಾಮ ಪಂಚಾಯಿತಿ ಸದಸ್ಯ ರಾಮನಗೌಡ ಪಾಟೀಲ್ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ಆತ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾನೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಉಗರ್ ಖುರ್ದ್ ಗ್ರಾಮದಲ್ಲಿ ಮಾತನಾಡಿದ ಶಾಸಕರು, ರಾಮನಗೌಡ ಪಾಟೀಲ್ ಮಾಡಿರುವ ಆರೋಪಕ್ಕೂ ನನಗೂ ಸಂಬಂಧವಿಲ್ಲ. ಆತ ನನಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾನೆ. ನಾನು ಕಿರಿಕುಳ ನೀಡಿದ್ದಕ್ಕೆ ಆತನ ಬಳಿ ಸಾಕ್ಷಿ ಇದ್ದರೆ ಕೋರ್ಟ್ ಗೆ ಹೋಗಲಿ. ಅನಗತ್ಯವಾಗಿ ಯಾಕೆ ನನ್ನ ತೇಜೋವಧೆ ಮಾಡುತ್ತಿದ್ದಾರೆ ಗೊತ್ತಿಲ್ಲ. ರಾಮನಗೌಡ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಹೇಳಿದ್ದಾರೆ.

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ್ರೆ ಹೇಗೆ ಸಹಿಸಲಿ? ರಾಷ್ಟ್ರಪತಿ, ಪ್ರಧಾನಿ, ಸಿಎಂ ಕಿರುಕುಳ ಕೊಡ್ತಿದ್ದಾರೆ ಎಂದರೆ ಸರಿಯಾಗುತ್ತಾ? ಮನೆ ಕಟ್ಟಬೇಕು ಎಂದು ಆತನೇ ನನ್ನ ಬಳಿ 3 ಲಕ್ಷ ಹಣ ಪಡೆದುಕೊಂಡಿದ್ದಾನೆ. ವಾಪಸ್ ಕೇಳಿದರೆ ಸುಳ್ಳು ಆರೋಪ ಮಾಡುತ್ತಿದ್ದಾನೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read