BIG NEWS: ತಹಶೀಲ್ದಾರ್ ವರ್ಗಾವಣೆ ವಿವಾದ; ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಈತನಕ ನಾನು ವರ್ಗಾವಣೆ ಅಥವಾ ನೇಮಕಕ್ಕೆ ಲೆಟರ್ ನೀಡಿಲ್ಲ, ವರ್ಗಾವಣೆ ಬಗ್ಗೆ ಸಿಎಂ ಬೊಮ್ಮಾಯಿ ಅವರನ್ನೂ ಭೇಟಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ತಹಶೀಲ್ದಾರ್ ವರ್ಗಾವಣೆ ಬಗ್ಗೆ ನಾನು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿಲ್ಲ, ಯಾವುದೇ ಲೆಟರ್ ಕೊಟ್ಟಿಲ್ಲ. 14 ತಹಶೀಲ್ದಾರ್ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಷ್ಟೊಂದು ತಹಶೀಲ್ದಾರ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಗ್ರೇಡ್ 1 ಅಧಿಕಾರಿಗಳ ಅಲಭ್ಯತೆಯೂ ಶಿವಮೊಗ್ಗ ಜಿಲ್ಲೆಯಲ್ಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read