HomeKarnatakaBIG NEWS: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ದುರ್ಮರಣ

BIG NEWS: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ದುರ್ಮರಣ

 

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಶ್ರವಣಬೆಳಗೊಳ ಹೋಬಳಿಯ ಬಿ. ಚೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

16 ವರ್ಷದ ಪ್ರಜ್ವಲ್ ಮೃತ ಬಾಲಕ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ.

ತೋಟದಲ್ಲಿ ಬಿದ್ದಿದ್ದ ತೆಂಗಿನ ಕಾಯಿ ಎತ್ತುವಾಗ ತೆಂಗಿನ ಮರದಿಂದ ತೆಂಗಿನಗೊನೆ ಬಾಲಕನ ತಲೆಯ ಮೇಲೆ ಬಿದ್ದಿದ್ದು, ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ.

ಶ್ರವಣಬೆಳಗೊಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular