BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ಹಣ ಜಪ್ತಿ

ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವನಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆದರೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರ್ಗಿಯ ಫರಹತಾಬಾದ್ ನಲ್ಲಿ ಚಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ 1 ಕೋಟಿ ರೂಪಾಯಿ ಪತ್ತೆಯಾಗಿದೆ.

ರವಿ ಎಂಬುವವರು ಕಾರಿನಲ್ಲಿ ಈ ಹಣವನ್ನು ಸಾಗಿಸುತ್ತಿದ್ದರು. ಕಾರಿನ ಸಮೇತ ಹಣವನ್ನು ಜಪ್ತಿ ಮಾಡಿರುವ ಪೊಲೀಸರು ರವಿ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read