
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರ್ಗಿಯ ಫರಹತಾಬಾದ್ ನಲ್ಲಿ ಚಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ 1 ಕೋಟಿ ರೂಪಾಯಿ ಪತ್ತೆಯಾಗಿದೆ.
ರವಿ ಎಂಬುವವರು ಕಾರಿನಲ್ಲಿ ಈ ಹಣವನ್ನು ಸಾಗಿಸುತ್ತಿದ್ದರು. ಕಾರಿನ ಸಮೇತ ಹಣವನ್ನು ಜಪ್ತಿ ಮಾಡಿರುವ ಪೊಲೀಸರು ರವಿ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

