
ಬೆಳಗಾವಿಯ ನಿಪ್ಪಾಣಿ ತಾಲೂಕಿನ ಕೊಗೊನೊಳ್ಳಿ ಚಕ್ ಪೋಸ್ಟ್ ಬಳಿ ಬಸ್ ತಪಾಸಣೆ ನಡೆಸಿದಾಗ 1.5 ಕೋಟಿ ರೂಪಾಯಿ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ.
ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಪಾಸಣೆ ನಡೆಸಿದಾಗ ಪ್ರಯಾಣಿಕರೊಬ್ಬರ ಬಳಿ ದಾಖಲೆ ಇಲ್ಲದ 1.5 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಹಣವನ್ನು ಜಪ್ತಿ ಮಾಡಿರುವ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

