BIG NEWS: ದೆಹಲಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ; ಹೈಕಮಾಂಡ್ ಅಂಗಳಕ್ಕೆ ಸಿಎಂ ಕುರ್ಚಿ ಕಸರತ್ತು

Karnataka Assembly Election Verdict Will Teach BJP Lesson, Says Congress Leader Mallikarjuna Kharge

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಪಾಳೆಯದಲ್ಲಿ ಕಸರತ್ತು ಆರಂಭವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದೇ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮಾಜಿ ಸಿಎಂ ಸಿದ್ದರಾಮಯ್ಯ, ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಆಯ್ಕೆ ಮಾಡುವಂತೆ ಪಟ್ಟು ಹಿಡಿದಿದ್ದರೆ, ಡಿ.ಕೆ. ಶಿವಕುಮಾರ್ ಹೈಕಮಾಂಡ್ ಅವರೇ ನೇರವಾಗಿ ಆಯ್ಕೆ ಮಾಡಲಿ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರ ಅಭಿಪ್ರಾಯವನ್ನು ಪಡೆದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read