BIG NEWS: ನಕಲಿ ನೋಟು ಹಾವಳಿ; ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿ ಮಾಡಿದ RBI

ಬೆಂಗಳೂರು: ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಉಡುಪಿ, ಮಣಿಪಾಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಕಲಿ ನೋಟುಗಳ ಕಾರುಬಾರು ನಡೆದಿದೆ.

ನಕಲಿ ನೋಟುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಬಿ ಐ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಗಳ ವಿರುದ್ಧ ದೂರು ದಾಖಲಿಸಿದೆ.

100 ರೂಪಾಯಿ ಮುಖ ಬೆಲೆಯ ಒಟ್ಟು 30 ನೋಟುಗಳು ಪತ್ತೆಯಾಗಿದ್ದು, ಎರಡು ದಿನಗಳಲ್ಲಿ 4 ಎಫ್ ಐ ಆರ್ ದಾಖಲಾಗಿದೆ. ಹುಬ್ಬಳ್ಳಿ, ಉಡುಪಿ, ಮಣಿಪಾಲ್, ಬೆಂಗಳೂರಿನ ಮಲ್ಲೇಶ್ವರಂ ಬ್ಯಾಂಕ್ ನ ಬ್ರ್ಯಾಂಚ್ ಗಳಲ್ಲಿ ಆರ್ ಬಿ ಐ ರಿಮೀಟ್ ಮಾಡುವಾಗ ನಕಲಿ ನೋಟುಗಳು ಪತ್ತೆಯಾಗಿವೆ.

ಈ ಹಿನ್ನೆಲೆಯಲ್ಲಿ ಆರ್ ಬಿ ಐ ಮ್ಯಾನೇಜರ್ ಆನಂದ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಯುಬಿಐ ಬ್ಯಾಂಕ್ ಮ್ಯಾನೇಜರ್ ಗಳ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ನೋಟುಗಳ ಜಾಲದ ಹಿಂದಿರುವವರ ಬಗ್ಗೆ ಪೊಲಿಸರು ತನಿಖೆ ಚುರುಕುಗೊಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read