BIG NEWS: ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ; ಖಾಸಗಿ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುದೀಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟ ಸುದೀಪ್ ಗೆ ಪತ್ರ ಬರೆದಿರುವ ಅನಾಮಧೇಯ ವ್ಯಕ್ತಿ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ನಿರ್ಮಾಪಕ, ಸುದೀಪ್ ಆಪ್ತ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಐಪಿಸಿ ಸೆಕ್ಷನ್ 504, 506 ಹಾಗೂ ಐಟಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read