HomeKarnatakaBIG NEWS: ನನ್ನ ಸೋಲಿಸುವುದಲ್ಲ, ಇಡೀ ರಾಜ್ಯದಲ್ಲಿಯೇ ಬಿಜೆಪಿಯನ್ನು ಸೋಲಿಸಿದರು; ಮಾಜಿ ಸಿಎಂ ಜಗದೀಶ್ ಶೆಟ್ಟರ್

BIG NEWS: ನನ್ನ ಸೋಲಿಸುವುದಲ್ಲ, ಇಡೀ ರಾಜ್ಯದಲ್ಲಿಯೇ ಬಿಜೆಪಿಯನ್ನು ಸೋಲಿಸಿದರು; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾನು ಕಳೆದ ಒಂದು ವಾರದಿಂದ ಇದನ್ನೇ ಹೇಳುತ್ತಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಗೆ ಬೆಂಬಲಿಸಿದ್ದಕ್ಕೆ ಜನರಿಗೆ ಧನ್ಯವಾದ. ನನಗೆ ಗೆಲ್ಲಲು ಸಾಧ್ಯವಾಗಿಲ್ಲ, ಜನತೆ ತೀರ್ಪಿಗೆ ಗೌರವ ಕೊಡುತ್ತೇನೆ ಎಂದರು.

ನನ್ನ ಸೋಲಿಸುವುದಲ್ಲ, ಇಡೀ ರಾಜ್ಯದಲ್ಲಿ ಜನರು ಬಿಜೆಪಿಯನ್ನು ಸೋಲಿಸಿದರು. ನನ್ನನ್ನು ಟಾರ್ಗೆಟ್ ಮಾಡಿದವರೇ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular