HomeKarnatakaBIG NEWS: ನಮ್ಮಲ್ಲಿ ಬಣ ರಾಜಕೀಯವಿಲ್ಲ; ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ; ಸಿಎಂ...

BIG NEWS: ನಮ್ಮಲ್ಲಿ ಬಣ ರಾಜಕೀಯವಿಲ್ಲ; ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಮೂಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರು ಹುಬ್ಬಳ್ಳಿ, ಕುಂದಗೋಳ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಆಗಮನದಿಂದಾಗಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನವುಂಟಾಗಿದೆ ಎಂದರು.

ಈಗಾಗಲೇ ಮೈಸೂರು ಹಾಗೂ ಮಂಡ್ಯ ಭಾಗದಲ್ಲಿ ಅಮಿತ್ ಶಾ ಭೇಟಿ ಕೊಟ್ಟಿದ್ದರು. ಮುಂದಿನ ತಿಂಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ಅಸಮಾಧಾನವೂ ಇಲ್ಲ. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಒಗ್ಗಟ್ಟಿನಿಂದ ನಡೆದು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular