BIG NEWS: ನಾನು ಓಡಿ ಹೋಗುವ ಸಿಎಂ ಅಲ್ಲ, ನನ್ನ ಕೊನೇ ಉಸಿರಿರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ; ಶಿಗ್ಗಾಂವಿಯಲ್ಲಿ ಗುಡುಗಿದ ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ಸತತ 15 ವರ್ಷಗಳ ಕಾಲ ಶಿಗ್ಗಾಂವಿ ಜನರು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ಶಿಗ್ಗಾಂವಿ ಜನರ ಪ್ರೀತಿಗೆ ಸೋತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗಿ ವಿದ್ಯಾರ್ಥಿಗಳಿಗೆ, ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಈ ಬಾರಿಯೂ ಕ್ಷೇತ್ರದ ಜನರು ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಸುದ್ದಿ ಹರಡಿತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿಯಲ್ಲ. ನನ್ನ ಕೊನೆ ಉಸಿರುವವರೆಗೂ ಶಿಗ್ಗಾಂವಿ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ. ನನ್ನ ಸಾವಿನ ಬಳಿಕ ನನ್ನನ್ನು ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read