HomeKarnatakaBIG NEWS: ನಾನು ಕಾಂಗ್ರೆಸ್ ಸೇರಲಿದ್ದೇನೆ; ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

BIG NEWS: ನಾನು ಕಾಂಗ್ರೆಸ್ ಸೇರಲಿದ್ದೇನೆ; ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮಾತೃ ಪಕ್ಷ ತೊರೆಯುವುದು ಈಗಾಗಲೇ ಬಹುತೇಕ ಖಚಿತವಾಗಿದ್ದು, ಆದರೆ ಯಾವ ಪಕ್ಷ ಸೇರಲಿದ್ದಾರೆ ಎಂಬುದರ ಗೊಂದಲ ಮೂಡಿತ್ತು.

ಶಿವಲಿಂಗೇಗೌಡ ಕೂಡ ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳ ಜೊತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದರು. ಇದೀಗ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದ್ದಾರೆ.

ಅರಸಿಕೆರೆಯಲ್ಲಿ ಮಾತನಾಡಿದ ಶಿವಲಿಂಗೇಗೌಡ, ಕಾಂಗ್ರೆಸ್ ಸೇರ್ಪಡೆ ಕುರಿತಂತೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಶೀಘ್ರದಲ್ಲಿಯೇ ನಾನು ಸೇರ್ಪಡೆಯಾಗಲಿದ್ದು, ಆ ಪಕ್ಷದಿಂದ ಟಿಕೆಟ್ ನೀಡಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular