BIG NEWS: ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆ

ಹಾಸನ; ತುಮಕೂರಿನಲ್ಲಿ ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ನಾಲ್ವರು ಮಕ್ಕಳು ಹಾಸನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

ತುಮಕೂರಿನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಹಾಸನಕ್ಕೆ ತೆರಳಿದ್ದ ಮಕ್ಕಳು ಸುತ್ತಾಟ ನಡೆಸಿದ್ದರು. ಹಾಸನದ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಮಕ್ಕಳನ್ನು ಕಂಡು ಪೊಲೀಸರು ಅನುಮಾನದಿಂದ ವಿಚಾರಿಸಿದಾಗ ಶಿರಾದಿಂದ ಬಂದಿದ್ದಾರೆ ಎಂಬುದು ತಿಳಿದುಬಂದಿದೆ.

ಇಂದು ರಾತ್ರಿ ಹಾಸನದಿಂದ ನಾಲ್ವರು ಮಕ್ಕಳನ್ನು ಪೊಲೀಸ್ ಸಿಬ್ಬಂದಿಗಳು ಶಿರಾಗೆ ಕರೆತರಲಿದ್ದಾರೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳಾದ ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮೀ ಹಾಗೂ ಭಾನು ಎರಡು ದಿನಗಳಿಂದ ಕಣ್ಮರೆಯಾಗಿದ್ದರು. ಆತಂಕಗೊಂಡ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read