HomeKarnatakaBIG NEWS: ನಾಮಪತ್ರ ಸಲ್ಲಿಕೆಗೆ ಸಮಯ ಮುಕ್ತಾಯ; ನಾಳೆಯಿಂದ ನಾಮಪತ್ರ ಪರಿಶೀಲನೆ

BIG NEWS: ನಾಮಪತ್ರ ಸಲ್ಲಿಕೆಗೆ ಸಮಯ ಮುಕ್ತಾಯ; ನಾಳೆಯಿಂದ ನಾಮಪತ್ರ ಪರಿಶೀಲನೆ

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನೀಡಿದ್ದ ಸಮಯ ಮುಕ್ತಾಯಗೊಂಡಿದೆ.

ಏಪ್ರಿಲ್ 13ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಸಮಯ ಮುಗಿದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೇ ದಿನ. ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular