HomeKarnatakaBIG NEWS: ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಬಿಜೆಪಿ ಚಾಣಾಕ್ಷ ನಡೆ; ಹೊಳೆನರಸೀಪುರದಿಂದಲೂ ಪ್ರೀತಂ ಗೌಡ...

BIG NEWS: ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಬಿಜೆಪಿ ಚಾಣಾಕ್ಷ ನಡೆ; ಹೊಳೆನರಸೀಪುರದಿಂದಲೂ ಪ್ರೀತಂ ಗೌಡ ಕಣಕ್ಕಿಳಿಯುವ ಸಾಧ್ಯತೆ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದ್ದು, ಈಗಾಗಲೇ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದ ಬಿಜೆಪಿ ಮತ್ತೊಂದು ಚಾಣಾಕ್ಷ ನಡೆ ಅನುಸರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಪ್ರೀತಂ ಗೌಡ ಅವರಿಗೆ ಹೆಚ್‍.ಡಿ. ರೇವಣ್ಣ ಕಣಕ್ಕಿಳಿದಿರುವ ಹೊಳೆನರಸೀಪುರ ಕ್ಷೇತ್ರದಿಂದಲೂ ನಾಮಪತ್ರ ಸಲ್ಲಿಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ಹೀಗಾಗಿ ಇಂದು ಬೆಳಗ್ಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರೀತಂ ಗೌಡ, ಕಾರ್ಯಕರ್ತರ ಬಳಿ ಹೊಳೆನರಸೀಪುರದಲ್ಲೂ ನಾನು ನಾಮಪತ್ರ ಸಲ್ಲಿಸಬೇಕಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೀಗಾಗಿ ಪ್ರೀತಂ ಗೌಡ ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular