BIG NEWS: ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣ ಬದಲಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಹಾವೇರಿ: ಕಾಂಗ್ರೆಸ್ ಸರ್ಕಾರ ಹೋಗುವಂತಹ ದಾರಿ ನೋಡಿದರೆ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಬಸಾರಾಜ್ ಬೊಮ್ಮಾಯಿ, ಇನ್ನು ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣ ಬದಲಾಗಲಿದೆ ಎಂದು ಹೇಳಿದರು.

ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆಯೇ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೇವೆ. ನಾವು ತಂದ ಜನಪರ ಕಾನೂನು ರದ್ದುಪಡಿಸಲು ಹೊರಟಿದ್ದಾರೆ. ಎಲ್ಲೋ ಅಲ್ಪಸ್ವಲ್ಪ ವ್ಯತ್ಯಾಸವಾಗಿದ್ದಕ್ಕೆ ನಾವು ಸೋತಿರಬಹುದು. ಆದರೆ ನಾವು ಸ್ವಾಭಿಮಾನ ಕಳೆದುಕೊಂಡಿಲ್ಲ. ಮೋದಿಯವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಮತ್ತೆ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read