BIG NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ; ಯಾವೆಲ್ಲ ದಾಖಲೆಗಳು ಅಗತ್ಯ…? ಮಹತ್ವದ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 16ರಿಂದ ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡ್ ಇರುವ ಮಹಿಳೆಯರಿಗೆ ಈ ಯೋಜನೆ ಅನ್ವಯವಾಗಲಿದೆ ಎಂದರು.

ನಾಳೆಯಿಂದ ಆನ್ ಲೈನ್, ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ್ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮಹಿಳೆಯರು ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮಾಹಿತಿ ನೀಡಬೇಕು. ಅರ್ಜಿ ಸಲ್ಲಿಸಲು ಯಾವುದೇ ಕೊನೇ ದಿನಾಂಕ ಇರುವುದಿಲ್ಲ. ಈ ವರ್ಷ ಪೂರ್ತಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅವಕಾಶವಿರುತ್ತದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಗೊಂದಲಗಳಿದ್ದರೆ ಸಹಾಯ ವಾಣಿಗೆ ಕರೆ ಮಾಡಿಬಗೆಹರಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆ -1902 ಸಂಖ್ಯೆಗೆ ಕರೆ ಮಾಡಬಹುದು. ಗೃಹಲಕ್ಷ್ಮೀ ಯೋಜನೆಗೆ ವಾರ್ಷಿಕವಾಗಿ 30 ಸಾವಿರ ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read