BIG NEWS: ನಾಳೆಯಿಂದ ಬಜೆಟ್ ಅಧಿವೇಶನ ಆರಂಭ; ಕೊನೆ ಅಧಿವೇಶನ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದ ಸ್ಪೀಕರ್ ಕಾಗೇರಿ

ಬೆಂಗಳೂರು: ನಾಳೆಯಿಂದ ಫೆ.24 ರ ವರೆಗೆ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಇದು ವಿಧಾನಸಭೆಯ 15 ನೇ ಮತ್ತು ಕೊನೆಯ ಅಧಿವೇಶನವಾಗಿದೆ. ಶಾಸಕರು ನಿರ್ಲಕ್ಷ್ಯ ಮಾಡದೇ ಅಧಿವೇಶನಕ್ಕೆ ಹಾಜರಾಗುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಶಾಸಕರು 5 ವರ್ಷ ಯಶಸ್ವಿಯಾಗಿ ಮುಗಿಸಿದ್ದೀರಿ. ಕೊನೆ ಅಧಿವೇಶನ ಎಂದು ನಿರ್ಲಕ್ಷ್ಯ ಬೇಡ. ಪ್ರಜಾಪ್ರಭುತ್ವ ದೇಗುಲ ಎಂದು ಕರೆಯಲಾಗುವ ಸದನ ಇದು. ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶನದಲ್ಲಿ ಭಾಗವಹಿಸುವಂತೆ ಸೂಚಿಸಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲರು ವಿಧಾನಮಂಡಲದ ಉಭಯ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 20ರಿಂದ 24ರವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read