HomeKarnatakaBIG NEWS: ನಾಳೆಯೇ ನೂತನ ಸಿಎಂ ಪ್ರಮಾಣವಚನ; ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ್ಧತೆ

BIG NEWS: ನಾಳೆಯೇ ನೂತನ ಸಿಎಂ ಪ್ರಮಾಣವಚನ; ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಾಳೆಯೇ ನಡೆಯಲಿದ್ದು, ಕಂಠೀರವ ಸ್ಟೇಡಿಯಂ ನಲ್ಲಿ ಭರದ ಸಿದ್ಧತೆ ನಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಸಿಎಂ ಸ್ಥಾನಕ್ಕೆ ಬಹುತೇಕ ಫೈನಲ್ ಎಂದು ಹೇಳಲಾಗುತ್ತಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ನೂತನ ಸಿಎಂ ಪ್ರಮಾಣವಚನಕ್ಕೆ ಕಂಠೀರವ ಸ್ಟೇಡಿಯಂ ಸಿದ್ಧಗೊಳ್ಳುತ್ತಿದೆ.

ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಠೀರವ ಕ್ರೀಡಾಂಗಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಪ್ರಮಾಣ ವಚನಕ್ಕಾಗಿ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದತ್ತ ಧಾವಿಸಿರುವ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಸಿಹಿ ಹಂಚಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular