BIG NEWS: ನಿರ್ಮಲಾನಂದನಾಥ ಶ್ರೀ ಅಂಗಳ ತಲುಪಿದ ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ

ಬೆಂಗಳೂರು: ಉರಿಗೌಡ, ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ವಿಚಾರ ಇದೀಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ ಅಂಗಳ ತಲುಪಿದೆ.

ಉರಿಗೌಡ, ನಂಜೇಗೌಡ ಹೆಸರಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಸಿನಿಮಾ ಮಾಡಲು ನಿರ್ಧರಿಸಿದ್ದು, ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಚಿವರು ನಿರ್ಮಲಾನಂದನಾಥ ಸ್ವಾಮಿಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಶ್ರೀಗಳ ಸಲಹೆ ಪಡೆದು ಸಿನಿಮಾ ನಿರ್ಮಾಣದ ಬಗ್ಗೆ ಮುಂದುವರೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ಅವರಿಂದ ನಿರ್ಮಲಾನಂದನಾಥಶ್ರೀ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read