BIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಲೈಸನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ; ಠಾಣೆಗೆ ಒಪ್ಪಿಸಲು ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಶಶ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹೇರಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಲೈಸನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವಂತಿಲ್ಲ. ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ಪೊಲಿಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.

ಸಾರ್ವಜನಿಕರು ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ತಮ್ಮ ಶಸ್ತ್ರಾಸ್ತ್ರಗಳನ್ನು ಏಪ್ರಿಲ್ 16ರರೊಳಗೆ ಒಪ್ಪಿಸಬೇಕು. ಚುನಾವಣೆ ಮುಗಿದ ನಂತರ ಮೇ 16ರರ ಬಳಿಕ ಶಸ್ತ್ರಾಸ್ತ್ರಗಳನ್ನು ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read