
ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿತ್ತು.
ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿತ್ತಲ್ಲದೆ, ಸರ್ಕಾರಿ ವಸತಿಗೃಹಗಳನ್ನು ರಾಜಕೀಯ ನಾಯಕರು ಬಳಸುವಂತಿಲ್ಲ ಎಂದು ಸೂಚಿಸಲಾಗಿತ್ತು.
ಈಗ ಮೇ 13 ರಂದು ಮತ ಎಣಿಕೆ ನಡೆದಿದ್ದು, 224 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಹಿಂಪಡೆದುಕೊಂಡಿದೆ.
