BIG NEWS: ನೀಲಿ ಚಿತ್ರ ತಾರೆಗೆ ಹಣ ಸಂದಾಯ ಆರೋಪ; ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್

ನೀಲಿ ಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಅಮೆರಿಕ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣ ಎದುರಿಸಿ ಬಂಧನಕ್ಕೊಳಗಾದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ.

ತಮ್ಮಿಬ್ಬರ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು ಎಂದು ನೀಲಿ ಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಆರೋಪವನ್ನು ಡೊನಾಲ್ಡ್ ಟ್ರಂಪ್ ಎದುರಿಸುತ್ತಿದ್ದಾರೆ. ಹೀಗಾಗಿ ಮ್ಯಾನ್ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ 76 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಶರಣಾಗತರಾಗಿದ್ದರು.

ಬಳಿಕ ಅವರನ್ನು ತಮ್ಮ ವಶಕ್ಕೆ ಪಡೆದ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಡೊನಾಲ್ಡ್ ಟ್ರಂಪ್ ಅವರ ಬೆರಳಚ್ಚು ಮಾದರಿ ಪಡೆಯುವುದರ ಜೊತೆಗೆ ಅವರ ಎಲ್ಲ ವೈಯಕ್ತಿಕ ವಿವರಗಳನ್ನು ದಾಖಲು ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read