HomeKarnatakaBIG NEWS: ನೂತನ ಸಚಿವರಾಗಿ ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್ ಪ್ರಮಾಣವಚನ ಸ್ವೀಕಾರ

BIG NEWS: ನೂತನ ಸಚಿವರಾಗಿ ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಹೆಚ್.ಕೆ. ಪಾಟೀಲ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪೂರ, ಶಿವಾನಂದಪಾಟೀಲ್ ಪ್ರಮಾಣವಚನ ಸ್ವೀಕರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಕಾಂಗ್ರೆಸ್ ಶಾಸಕರು, ನೂತನ ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular