
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಸೇರಿದಂತೆ 24 ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಕಾಂಗ್ರೆಸ್ ಶಾಸಕರು, ನೂತನ ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

