BIG NEWS: ನ್ಯಾಯಾಂಗ ಬಂಧನದಲ್ಲಿರುವ ಎಚ್.ಡಿ. ರೇವಣ್ಣಗೆ ಮತ್ತೊಂದು ಸಂಕಷ್ಟ; ಪಕ್ಷದಿಂದ ಅಮಾನತು ಮಾಡುವಂತೆ ಹೆಚ್ಚಿದ ಒತ್ತಡ…!

ಲೈಂಗಿಕ ಕಿರುಕುಳಕ್ಕೆ ಗುರಿಯಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ಎಚ್.ಡಿ. ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಒತ್ತಾಯಿಸುತ್ತಿದ್ದು, ಇಂದು ಈ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬಹುತೇಕ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿದ್ದು, ಇದನ್ನು ನಿಭಾಯಿಸಬೇಕೆಂದರೆ ಅಮಾನತು ಮಾಡುವಂತಹ ಶಿಸ್ತು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಹಲವು ನಾಯಕರು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read