ಮಧ್ಯಪ್ರದೇಶದ ಇಂದೋರ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಪ್ರದರ್ಶನ ನೀಡಿದ್ದಾರೆ.
ಕೇವಲ 83 ಎಸೆತಗಳಲ್ಲಿ ಶತಕ ಬಾರಿಸಿದ್ದು, 101 ರನ್ ಗಳಿಸಿದ ಬಳಿಕ ತಮ್ಮ ವಿಕೆಟ್ ಒಪ್ಪಿಸಿದ್ದಾರೆ. ಈ ಪಂದ್ಯದಲ್ಲಿ ಶುಭಮನ್ ಗಿಲ್ ಸಹ ಶತಕ ಬಾರಿಸಿದ್ದು, ಏಕದಿನ ಪಂದ್ಯಗಳಲ್ಲಿ ಇದು ಅವರ ನಾಲ್ಕನೆಯ ಶತಕವಾಗಿದೆ.
ರೋಹಿತ್ ಶರ್ಮಾ ಇಂದಿನ ಶತಕದೊಂದಿಗೆ ಏಕದಿನ ಪಂದ್ಯಗಳಲ್ಲಿ ಅವರು ಒಟ್ಟು 30 ಸೆಂಚುರಿ ಬಾರಿಸಿದಂತಾಗಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿರುವ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ODI century No. 3⃣0⃣ for the Indian skipper 👏#INDvNZ | 📝: https://t.co/61sExvvUrq pic.twitter.com/h3UNIihQ03
— ICC (@ICC) January 24, 2023
Shubman Gill's glorious form in ODI cricket continues 🔥#INDvNZ | 📝: https://t.co/xoiYn9WEgR pic.twitter.com/XObdobmfQf
— ICC (@ICC) January 24, 2023