BIG NEWS: ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ವಿಚಾರ; ಸಿಎಂ ಬೊಮ್ಮಾಯಿ ನೀಡಿದ ಸ್ಪಷ್ಟನೆಯೇನು…..?

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕುಗಳಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮೀಸಲಾತಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ-ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.

ಮೀಸಲಾತಿ ಜಾರಿ ವಿಚಾರವಾಗಿ ಸಂಬಂಧಪಟ್ಟವರ ಜತೆ ಚರ್ಚೆ ನಡೆಸುತ್ತೇವೆ. ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ. ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಹೇಳಿದರು.

ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ಗುಡುಗಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read